Tuesday 28 November 2017

Simple beauty tips in Kannada. ಸರಳ ಮತ್ತು ಸುಲಭ ಸೌಂದರ್ಯ ಸಲಹೆಗಳು. ತುಳಸಿ ಎಲೆಗಳ ಮಹತ್ವ

• ಒಂದೆರಡು ಹನಿ‌ ತುಳಸಿ ರಸವನ್ನು ಕಿವಿಯೊಳಗೆ ಬಿಟ್ಟರೆ ಕಿವಿನೋವು ಕಡಿಮೆಯಾಗುತ್ತದೆ. • ತುಳಸಿ ಮೊಡವೆಗಳನ್ನು ನಿವಾರಣೆ ಮಾಡುತ್ತದೆ. ತುಳಸಿ ರಸಕ್ಕೆ ಚಿಟಕಿಯಷ್ಷು ಅರಿಶಿನ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಬಿಟ್ಟು ನೀರಿನಿಂದ ತೊಳೆಯಬೇಕು.
• ಸ್ವಲ್ಪ ತುಳಸಿ ಎಲೆಗಳನ್ನು ತೆಗೆದುಕೊಂಡು ಅದನ್ನು ದಪ್ಪಗಿನ ಪೇಸ್ಟ್ ಮಾಡಿ ಅದಕ್ಕೆ ಒಂದು ಚಮಚ ಜೇನು ತುಪ್ಪ ,ಒಂದು ಚಮಚ ನಿಂಬೆ ರಸ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಬಿಟ್ಟು ನೀರಿನಿಂದ ತೊಳೆಯಬೇಕು. • ತುಳಸಿ ಎಲೆಗಳನ್ನು ಪೇಸ್ಟ್ ಮಾಡಿ ಅರ್ಧ ಕಪ್ ಮೊಸರು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಬಿಟ್ಟು ನೀರಿನಿಂದ ತೊಳೆಯಬೇಕು. ಇದರಿಂದ ತ್ವಚೆ ಸ್ವಚ್ಛಗೊಳ್ಳುವುದರ ಜೊತೆಗೆ ಮುಖದ ಕಾಂತಿ ಹೆಚ್ಚುತ್ತದೆ. • ಕಡಲೆ ಹಿಟ್ಟು, ರೋಸ್ ವಾಟರ್ , ತುಳಸಿ ಎಲೆಗಳನ್ನು ಪೇಸ್ಟ್ ಮಾಡಿ ಮುಖ, ಕುತ್ತಿಗೆ, ಕೈಗೆ ಹಚ್ಚಿ ಅರ್ಧ ಗಂಟೆ ನಂತರ ತಣ್ಣೀರಿನಿಂದ ತೊಳೆಯಬೇಕು .ಇದರಿಂದ ಚರ್ಮದ ಸಮಸ್ಯೆಗಳು ನಿವಾರಣೆ ಆಗುವುದು. ಮತ್ತು ಚರ್ಮ ನಯವಾಗುತ್ತದೆ.



No comments:

Post a Comment

Specialty in Kannada.. firsts in Kannada

 ಕನ್ನಡದ ವಿಶಿಷ್ಟ ಹಾಗೂ ವೈವಿಧ್ಯಮಯ ಸಂಗತಿಗಳು